- ಟ್ರಯಲ್ ಕೋರ್ಟ್
- Like this post: 1
ಬೈರತಿ ಸುರೇಶ್ ವಿರುದ್ಧ ಮಾನಹಾನಿ ಹೇಳಿಕೆ ಬೇಡ; ಎಚ್. ವಿಶ್ವನಾಥ್‌ಗೆ ಸೆಷನ್ಸ್ ಕೋರ್ಟ್ ನಿರ್ಬಂಧ
- by Jagan Ramesh
- August 24, 2024
- 78 Views
ಬೆಂಗಳೂರು: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅಲಿಯಾಸ್ ಬಿ.ಎಸ್.ಸುರೇಶ್ ಅವರ ಮಾನಹಾನಿಯಾಗುವಂತಹ ಯಾವುದೇ ಹೇಳಿಕೆ ನೀಡಿದಂತೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಪ್ರತಿಬಂಧಕಾಜ್ಞೆ ಹೊರಡಿಸಿದೆ.
ವಿಶ್ವನಾಥ್ ಅವರಿಂದ 50 ಕೋಟಿ ರೂ. ಪರಿಹಾರದ ಜತೆಗೆ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಶಾಶ್ವತ ಪ್ರತಿಬಂಧಕಾಜ್ಞೆ ಹೊರಡಿಸುವಂತೆ ಕೋರಿ ಸಚಿವ ಸುರೇಶ್ ಸಲ್ಲಿಸಿದ್ದ ಮೂಲ ದಾವೆಯ ಭಾಗವಾಗಿರುವ ಮಧ್ಯಂತರ ಅರ್ಜಿಯನ್ನು ಶನಿವಾರ ಪುರಸ್ಕರಿಸಿರುವ 40ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಎನ್.ವೀಣಾ ಈ ಆದೇಶ ಮಾಡಿದ್ದಾರೆ.
ವಿಶ್ವನಾಥ್ ಅವರು ದೂರುದಾರರಾದ ಸುರೇಶ್ ವಿರುದ್ಧ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಮಾನಹಾನಿ ಹೇಳಿಕೆ ನೀಡದಂತೆ ಏಕಪಕ್ಷಕೀಯ ಮಧ್ಯಂತರ ಪ್ರತಿಬಂಧಕಾದೇಶ ಮಾಡಲಾಗಿದೆ. ಈ ಆದೇಶವು ಮುಂದಿನ ವಿಚಾರಣೆವರೆಗೆ ಜಾರಿಯಲ್ಲಿರಲಿದೆ ಎಂದು ಆದೇಶಿಸಿರುವ ನ್ಯಾಯಾಲಯ, ವಿಶ್ವನಾಥ್ ಅವರಿಗೆ ಸಮನ್ಸ್ ಮತ್ತು ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿದೆ.
ಸುರೇಶ್ ಪರ ವಾದ ಮಂಡಿಸಿದ ವಕೀಲ ಶತಭಿಷ್ ಶಿವಣ್ಣ, ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ ಎಂಬ ಮಾತು ಸೇರಿ ಹಲವು ಆಕ್ಷೇಪಾರ್ಹ ಹೇಳಿಕೆಗಳನ್ನು ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ನೀಡಿದ್ದಾರೆ. ಈ ಮೂಲಕ ಸುರೇಶ್ ಅವರ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ. ಲೀಗಲ್ ನೋಟಿಸ್ ನೀಡಿದ ಬಳಿಕವೂ ವಿಶ್ವನಾಥ್ ಅವರು ಸುರೇಶ್ ಅವರ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಕೋರ್ಟ್ ಆದೇಶದಲ್ಲೇನಿದೆ?
ಸಾರ್ವಜನಿಕ ವಿಚಾರದ ನೆಪದಲ್ಲಿ ಸುರೇಶ್ ವಿರುದ್ಧ ವಿಶ್ವನಾಥ್ ಅವರು ವೈಯಕ್ತಿಕ ಹೇಳಿಕೆ ನೀಡಿರುವುದು ನ್ಯಾಯಾಲಯದ ಮುಂದಿರುವ ದಾಖಲೆಗಳನ್ನು ಪರಿಶೀಲಿಸಿದಾಗ ತಿಳಿದು ಬಂದಿದೆ. ವಿಶ್ವನಾಥ್ ಅವರು ದೂರುದಾರರ ಮಾನಹಾನಿ ಮಾಡಿದ್ದು, ಅವರ ಘನತೆಗೆ ಹಾನಿ ಮಾಡುವುದು ವಿಶ್ವನಾಥ್ ಉದ್ದೇಶವಾಗಿದೆ. ದಾಖಲೆಗಳನ್ನು ವಿಶ್ಲೇಷಿಸಿದಾಗ ಮಧ್ಯಂತರ ಪ್ರತಿಬಂಧಕಾದೇಶ ಮಾಡಲು ಇದು ಸೂಕ್ತ ಪ್ರಕರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಇಲ್ಲವಾದಲ್ಲಿ ದಾವೆ ಇತ್ಯರ್ಥವಾಗುದರೊಳಗೆ ಸರಿಪಡಿಸಲಾಗದಂತಹ ಪರಿಸ್ಥಿತಿ ಸೃಷ್ಟಿಯಾಗಲಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.
Related Articles
Thank you for your comment. It is awaiting moderation.
Comments (0)