ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬದಲಿಸಲು ಕಾಂಗ್ರೆಸ್ ಯತ್ನ: ಬೆಳಗಾವಿಯ ‘ಸಂವಿಧಾನ ಉಳಿಸಿ’ ಕಾರ್ಯಕ್ರಮದಲ್ಲಿ ಫಡ್ನವೀಸ್ ವಾಗ್ದಾಳಿ
- by Legal Samachar
- November 28, 2026
- 11 Views
ಬೆಳಗಾವಿ: ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ನಡೆದ ‘ಸಂವಿಧಾನ ಉಳಿಸಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬದಲಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿನ ರಾಜಕೀಯ ಅಸ್ಥಿರತೆಯನ್ನು ಭಾರತದಲ್ಲೂ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳ ಅಲ್ಗಾರಿದಮ್ಗಳನ್ನು ದುರುಪಯೋಗಪಡಿಸಿಕೊಂಡು ಹೊಸ ವ್ಯವಸ್ಥೆ ಸ್ಥಾಪಿಸಲು ಯತ್ನಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಪ್ರತಿದಿನ ಸುಳ್ಳು ಹೇಳುವ ಮೂಲಕ ಜನರ ಅಭಿಪ್ರಾಯ ರೂಪಿಸಲು ಪ್ರಯತ್ನಿಸುತ್ತಾರೆ. ಒಂದೇ ಸುಳ್ಳನ್ನು ಪದೇಪದೆ ಹೇಳಿದರೆ ಜನರು ಅದನ್ನೇ ನಂಬುತ್ತಾರೆ ಎಂಬುದು ಅವರ ತಂತ್ರ ಎಂದು ಆರೋಪಿಸಿದ್ದಾರೆ.
ಮೋದಿ ಸರ್ಕಾರದ 12 ವರ್ಷಗಳ ಸಾಧನೆಗಳನ್ನು ಪ್ರಸ್ತಾಪಿಸಿದ ಫಡ್ನವೀಸ್, ವಿಶ್ವಬ್ಯಾಂಕ್ ವರದಿಯಂತೆ 50 ಕೋಟಿ ಜನರು ತೀವ್ರ ಬಡತನದಿಂದ ಹೊರಬಂದಿದ್ದು, ದೇಶದಲ್ಲಿ ಬಡತನದ ಪ್ರಮಾಣ ಶೇ.2.7ಕ್ಕೆ ಇಳಿದಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ದಶಕಗಳ ಕಾಲ ಬಡತನ ನಿರ್ಮೂಲನೆಯ ಘೋಷಣೆಗಳನ್ನಷ್ಟೇ ಮಾಡಿತ್ತು ಎಂದು ಟೀಕಿಸಿದ್ದಾರೆ.


Comments (0)