ಹೈಕೋರ್ಟ್ ಪ್ರಾಂಗಣದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪನೆಗೆ ಕೋರಿ ಅರ್ಜಿ; ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್
- by Jagan Ramesh
- February 4, 2025
- 63 Views

ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಚುನಾವಣೆಗೆ ಹೈಕೋರ್ಟ್ ಪ್ರಾಂಗಣದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಮುಖ್ಯ ಚುನಾವಣಾಧಿಕಾರಿ/ಉನ್ನತಾಧಿಕಾರ ಸಮಿತಿ ಹಾಗೂ ಬೆಂಗಳೂರು ವಕೀಲರ ಸಂಘಧ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಕೀಲರ ಸಂಘದ ಸದಸ್ಯರು ಹಾಗೂ ಮತದಾರರೂ ಆಗಿರುವ ಎಂ. ಚಾಮರಾಜ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಫೆಬ್ರವರಿ 6ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಬೆಂಗಳೂರು ವಕೀಲರ ಸಂಘದ ಹೈಕೋರ್ಟ್ ವಿಭಾಗದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಸದಸ್ಯರಿದ್ದು, ಇವರಲ್ಲಿ ಅನೇಕರು ಹಿರಿಯ ಸದಸ್ಯರಿದ್ದಾರೆ. ಹೈಕೋರ್ಟ್ ವಿಭಾಗದ ಚುನಾವಣೆಯಲ್ಲಿ ಸದಸ್ಯರು ಮತ್ತು ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಹೈಕೋರ್ಟ್ ಪ್ರಾಂಗಣದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸುವಂತೆ ಉನ್ನತಾಧಿಕಾರ ಸಮಿತಿಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
Related Articles
Thank you for your comment. It is awaiting moderation.
Comments (0)