ಕೋರ್ಟ್ ಹಾಲ್‌ಗಳಲ್ಲಿ ಅಂಬೇಡ್ಕರ್ ಭಾವಚಿತ್ರ; ಹೈಕೋರ್ಟ್ ತೀರ್ಮಾನ
- by Prashanth Basavapatna
- June 20, 2025
- 150 Views
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳು ಸೇರಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ವಿಚಾರಣಾ ನ್ಯಾಯಾಲಯಗಳ ಕೋರ್ಟ್ ಹಾಲ್‌ಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲು ಹೈಕೋರ್ಟ್ ತೀರ್ಮಾನ ಕೈಗೊಂಡಿದೆ.
ರಾಜ್ಯದ ಎಲ್ಲ ನ್ಯಾಯಾಲಯಗಳ ಕೋರ್ಟ್ ಹಾಲ್‌ಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸುವಂತೆ ಸಾರ್ವಜನಿಕರು, ವಕೀಲರು, ಸಂಘ-ಸಂಸ್ಥೆಗಳು ಸಲ್ಲಿಸಿದ್ದ ಮನವಿ ಪತ್ರ ಹಾಗೂ ರಾಜ್ಯ ಸರ್ಕಾರ ಕಾಲ ಕಾಲಕ್ಕೆ ನಡೆಸಿದ್ದ ಸಂವಹನವನ್ನು ಪರಿಗಣಿಸಿ ಹೈಕೋರ್ಟ್ ಈ ಕ್ರಮ ಕೈಗೊಂಡಿದೆ.
ಕಳೆದ ಏಪ್ರಿಲ್ 26ರಂದು ನಡೆದ ಹೈಕೋರ್ಟ್ ನ್ಯಾಯಮೂರ್ತಿಗಳ ಪೂರ್ಣಪೀಠದ ಸಭೆಯಲ್ಲಿ ಈ ಕುರಿತಂತೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಕೋರ್ಟ್ ಹಾಲ್‌ಗಳ ಪ್ರಮುಖ ಸ್ಥಳಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲಾಗುತ್ತದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles
Thank you for your comment. It is awaiting moderation.


Comments (0)