ಸತೀಶ್ ಸೈಲ್‌ಗೆ ಕಸ್ಟಡಿಯಲ್ಲೇ ಚಿಕಿತ್ಸೆ ನೀಡಬಹುದೇ?; ಏಮ್ಸ್ ವೈದ್ಯರಿಂದ ವರದಿ ಕೇಳಿದ ಹೈಕೋರ್ಟ್
- by Jagan Ramesh
- January 13, 2026
- 11 Views
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಶಾಸಕ ಸತೀಶ್ ಸೈಲ್ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುವ ಅಗತ್ಯವಿದೆಯೇ ಅಥವಾ ಅವರಿಗೆ ಕಸ್ಟಡಿಯಲ್ಲಿಯೇ ಚಿಕಿತ್ಸೆ ನೀಡಬಹುದೇ ಎಂಬ ಕುರಿತು ವರದಿ ನೀಡುವಂತೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ವೈದ್ಯರಿಗೆ ಹೈಕೋರ್ಟ್ ಸೂಚಿಸಿದೆ.
ಪ್ರಕರಣದ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಮಧ್ಯಂತರ ವೈದ್ಯಕೀಯ ಜಾಮೀನು ರದ್ದುಪಡಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸತೀಶ್ ಸೈಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಸತೀಶ್ ಸೈಲ್ ಪರ ವಕೀಲರು ಹಾಜರಾಗಿ, 2026ರ ಜನವರಿ 21ರಂದು ವೈದ್ಯಕೀಯ ತಪಾಸಣೆಗೆ ಒಳಗಾಗುವಂತೆ ಏಮ್ಸ್ ವೈದ್ಯರು ಅರ್ಜಿದಾರರಿಗೆ ಸೂಚಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಸತೀಶ್ ಸೈಲ್ ಆಸ್ಪತ್ರೆಯಲ್ಲಿರುವ ಅಗತ್ಯವಿದೆಯೇ ಅಥವಾ ಅವರಿಗೆ ಕಸ್ಟಡಿಯಲ್ಲಿಯೇ ಚಿಕಿತ್ಸೆ ನೀಡಬಹುದೇ ಎಂಬ ಬಗ್ಗೆ ವರದಿ ನೀಡುವಂತೆ ಏಮ್ಸ್ ವೈದ್ಯರಿಗೆ ಸೂಚನೆ ನೀಡಿ ಅರ್ಜಿ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿತು. ಜತೆಗೆ, ಅರ್ಜಿದಾರರಿಗೆ ಮಂಜೂರು ಮಾಡಲಾಗಿರುವ ಮಧ್ಯಂತರ ವೈದ್ಯಕೀಯ ಮಧ್ಯಂತರ ಜಾಮೀನನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.
Related Articles
Thank you for your comment. It is awaiting moderation.


Comments (0)