ಸಚಿವ ಶಿವಾನಂದ ಪಾಟೀಲ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಬಸನಗೌಡ ಪಾಟೀಲ ಯತ್ನಾಳ್‌ಗೆ ನಿರ್ಬಂಧ

ಬೆಂಗಳೂರು: ರಾಜ್ಯ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರ ವಿರುದ್ಧ ಯಾವುದೇ ರೀತಿಯ ಅವಹೇಳನಕಾರಿ ಹೇಳಿಕೆ ನೀಡದಂತೆ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರನ್ನು ನಿರ್ಬಂಧಿಸಿ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಗುರುವಾರ ಪ್ರತಿಬಂಧಕಾದೇಶ ಹೊರಡಿಸಿದೆ.

ಮಾನಹಾನಿಕರ ಹೇಳಿಕೆ ನೀಡದಂತೆ ಬಸನಗೌಡ ಪಾಟೀಲ ಯತ್ನಾಳ್‌ ಅವರನ್ನು ನಿರ್ಬಂಧಿಸಿ ಶಾಶ್ವತ ಪ್ರತಿಬಂಧಕಾದೇಶ ಹೊರಡಿಸುವಂತೆ ಕೋರಿ ಸಚಿವ ಶಿವಾನಂದ ಪಾಟೀಲ್ ಸಲ್ಲಿಸಿರುವ ಮೂಲ ದಾವೆಯ ವಿಚಾರಣೆ ನಡೆಸಿದ ನಗರದ 27ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶೆ ಜಿ.ಎಸ್. ಪ್ರಶೀಲ ಕುಮಾರಿ ಅವರು ಈ ಮಧ್ಯಂತರ ಆದೇಶ ಮಾಡಿದರು. ಜತೆಗೆ, ದಾವೆ ಸಂಬಂಧ ಬಸನಗೌಡ ಪಾಟೀಲ ಯತ್ನಾಳ್‌ಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಲಾಗಿದೆ.

ಬಸನಗೌಡ ಪಾಟೀಲ ಯತ್ನಾಳ್‌ ಅವರು ಹಲವು ಟಿವಿ ಸಂದರ್ಶನಗಳಲ್ಲಿ ನನ್ನ ವಿರುದ್ಧ ಸುಳ್ಳು, ಆಧಾರರಹಿತ, ಅಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತ ಬಂದಿದ್ದಾರೆ. ಆ ಮೂಲಕ ನನ್ನ ಗೌರವ, ಘನತೆ ಮತ್ತು ಖ್ಯಾತಿಗೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ, ನನ್ನ ವಿರುದ್ಧ ಯಾವುದೇ ರೀತಿ ಮಾನಹಾನಿಕರ ಹೇಳಿಕೆ ನೀಡದಂತೆ ಯತ್ನಾಳ್‌ ಅವರನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಶಿವಾನಂದ ಪಾಟೀಲ ನ್ಯಾಯಾಲಯದ ಮೊರೆ ಹೋಗಿದ್ದಾರೆ.

Related Articles

Comments (0)

Leave a Comment