ಠೇವಣಿದಾರರ ಹಣ ಪಾವತಿಗೆ ಕೋರಿ ಅರ್ಜಿ; ಶ್ರೀ ಕಣ್ವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಸಕ್ಷಮ ವಿಶೇಷ ಅಧಿಕಾರಿಗೆ ನೋಟಿಸ್
- by Prashanth Basavapatna
- February 2, 2026
- 109 Views
ಬೆಂಗಳೂರು: ಶ್ರೀ ಕಣ್ವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಠೇವಣಿದಾರರ ಹಣವನ್ನು ಕಾಲಮಿತಿಯಲ್ಲಿ ಪಾವತಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸಕ್ಷಮ ಪ್ರಾಧಿಕಾರದ ವಿಶೇಷ ಅಧಿಕಾರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಶ್ರೀ ಕಣ್ವ ಸೌಹಾರ್ದ ಠೇವಣಿದಾರರ ಕಲ್ಯಾಣ ಸಂಘ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಸಕ್ಷಮ ಪ್ರಾಧಿಕಾರದ ವಿಶೇಷ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿತು.
ಠೇವಣಿದಾರರಿಗೆ ಕಾಲಮಿತಿಯೊಳಗೆ ಹಣಪಾವತಿಸುವ ಸಂಬಂಧ 2025ರ ಫೆಬ್ರವರಿ 12 ಮತ್ತು ಜುಲೈ 26ಕ್ಕೆ ನೀಡಲಾಗಿರುವ ಮನವಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸಕ್ಷಮ ಪ್ರಾಧಿಕಾರದ ವಿಶೇಷ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.
Related Articles
Thank you for your comment. It is awaiting moderation.



Comments (0)