ಪ್ರಚೋದನಕಾರಿ ಭಾಷಣ; ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
- by Jagan Ramesh
- June 19, 2026
- 1242 Views
ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ 2026ರ ಮಾರ್ಚ್ 23ರಂದು ಸ್ಥಳೀಯ ಹಿಂದುಪರ ಸಂಘಟನೆಗಳ ಒಕ್ಕೂಟ ಸ್ವಾತಂತ್ರ್ಯ ಸೇನಾನಿಗಳಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಸ್ಮರಣಾರ್ಥ ಹಮ್ಮಿಕೊಂಡ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮದ್ದೂರು ಠಾಣೆ ಪೊಲೀಸರು ಮಾರ್ಚ್ 23ರಂದು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ದೂರು ಹಾಗೂ ಅದರ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಅಲ್ಲದೆ, ಅರ್ಜಿ ಸಂಬಂಧ ಮದ್ದೂರು ಠಾಣೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.


Comments (0)