ಕರಾವಳಿ ಕರ್ನಾಟಕ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಕಾರ್ಯಸಾಧ್ಯತೆ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪನೆ ಮಾಡುವ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳ ಆದೇಶದಂತೆ ಮೂವರು ನ್ಯಾಯಮೂರ್ತಿಗಳ ಸಮಿತಿ ರಚಿಸಿ ರಿಜಿಸ್ಟ್ರಾರ್​ ಜನರಲ್​ ಆದೇಶಿಸಿದ್ದಾರೆ.

ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಅವರು ಸೆಪ್ಟೆಂಬರ್ 29ರಂದು ಅಧಿಸೂಚನೆ ಹೊರಡಿಸಿದ್ದು, ಸಮಿತಿಯು ಮಂಗಳೂರು/ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು–ಮಡಿಕೇರಿ, ಹಾಸನ, ದಾವಣಗೆರೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಕೀಲರ ಸಂಘಗಳು, ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ, ಆ ಭಾಗದಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯ ಕಾರ್ಯಸಾಧ್ಯತೆ ಕುರಿತು ವರದಿ ಸಲ್ಲಿಸಲಿದೆ.

Related Articles

Comments (0)

Leave a Comment