ಉತ್ತರ ಪ್ರದೇಶದಲ್ಲಿ ಶಾಲಾ ಬಸ್ಗೆ ಟ್ರಕ್ ಡಿಕ್ಕಿ; ನಾಲ್ವರು ವಿದ್ಯಾರ್ಥಿಗಳು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
- by Legal Samachar
- November 24, 2026
- 8 Views
ಕನ್ನೌಜ್: ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್ಪ್ರೆಸ್ವೇನಲ್ಲಿ ಶಾಲಾ ಬಸ್ಗೆ ವೇಗವಾಗಿ ಬಂದ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಂಗಳವಾರ ಠಾಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ 209ನೇ ಕಿ.ಮೀ. ಬಳಿ ಅಪಘಾತ ಸಂಭವಿಸಿದೆ. ಆಗ್ರಾದಿಂದ ಕೌಶಾಂಬಿಗೆ ಪಿಕ್ನಿಕ್ಗೆ ತೆರಳಿ ಹಿಂದಿರುಗುತ್ತಿದ್ದ ಬಸ್ನಲ್ಲಿ ಸುಮಾರು 50 ವಿದ್ಯಾರ್ಥಿಗಳು ಮತ್ತು ಆರು ಶಿಕ್ಷಕರಿದ್ದರು.

ಅಪಘಾತದಲ್ಲಿ 23 ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ತಿರ್ವಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.


Comments (0)