ಶೇ.33ರಷ್ಟು ಮಹಿಳಾ ಮೀಸಲಾತಿ ಐತಿಹಾಸಿಕ ಹೆಜ್ಜೆ; ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯ ದ್ವಿಗುಣವಾಗಲಿದೆ ಎಂದ ಕುಮಾರಸ್ವಾಮಿ
- by Legal Samachar
- November 27, 2026
- 8 Views
ನವದೆಹಲಿ: ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಹಾಗೂ ಕ್ಷೇತ್ರ ಮರುವಿಂಗಡಣೆ ಮಸೂದೆಗಳಿಗೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎರಡೂ ಮಸೂದೆಗಳನ್ನು ಸಂಸತ್ತಿನಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಸ್ತಾವನೆಗಳು ಐತಿಹಾಸಿಕ ಹೆಜ್ಜೆಗಳಾಗಿವೆ ಎಂದರು.

ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಬದಲಿಗೆ ಲೋಕಸಭೆಯಲ್ಲಿ ಅವುಗಳ ಪ್ರಾತಿನಿಧ್ಯ ದ್ವಿಗುಣವಾಗಲಿದೆ ಎಂದು ಸ್ಪಷ್ಟಪಡಿಸಿದರು.
ಮೂರು ದಶಕಗಳಿಗೂ ಹೆಚ್ಚು ಕಾಲ ಬಾಕಿ ಉಳಿದಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನ ಮುಂದೆ ತರಲು ನಿರ್ಧರಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ ಅವರು, ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿಸಲು ಈ ಪ್ರಸ್ತಾವನೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಹೇಳಿದರು.


Comments (0)