ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಹಗರಣ; ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತುರ್ತು ನೋಟಿಸ್
- by LegalSamachar
- September 24, 2026
- 7 Views
ಬೆಂಗಳೂರು: ಆ್ಯಂಬಿಡೆಂಟ್ ಕಂಪನಿಯ ಬಹುಕೋಟಿ ವಂಚನೆ ಹಗರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಕೆ. ಮಹಫೂಜ್ ಖಾನ್ ಅವರನ್ನು ಪ್ರಕರಣದಿಂದ ಕೈಬಿಟ್ಟ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.
ಜನಾರ್ದನ ರೆಡ್ಡಿ ಹಾಗೂ ಮಹಫೂಜ್ ಅಲಿ ಖಾನ್ ಅವರನ್ನು ಪ್ರಕರಣದಿಂದ ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2025ರ ಆಗಸ್ಟ್ 22ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಮಾಜಿ ಸಚಿವ ಜನಾರ್ಧನ ರೆಡ್ಡಿ, ಮೆಹಫೂಜ್ ಅಲಿ ಖಾನ್‌ಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿತು.
ಪ್ರಕರಣವೇನು?
ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆ ಬಂದಾಗ ಸಹಾಯ ಮಾಡುವುದಾಗಿ ಹೇಳಿ ಆ್ಯಂಬಿಡೆಂಟ್ ಕಂಪನಿಯಿಂದ 20 ಕೋಟಿ ರೂ. ಹಣ ಪಡೆದಿದ್ದರು ಎಂಬ ಆರೋಪವು ಜನಾರ್ದನ ರೆಡ್ಡಿ ಮತ್ತಿತರ ಮೇಲಿತ್ತು. ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ವಿಚಾರಣಾ ನ್ಯಾಯಾಲಯ ಪ್ರಕರಣದಿಂದ ಅವರನ್ನು ಕೈಬಿಟ್ಟು 2025ರ ಆಗಸ್ಟ್ 22ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ 8 ತಿಂಗಳ ಬಳಿಕ ಅಂದರೆ 2026ರ ಮೇ 2ರಂದು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಗುರುವಾರ ಅದರ ವಿಚಾರಣೆ ನಡೆದು ಜನಾರ್ದನ ರೆಡ್ಡಿ ಹಾಗೂ ಇತರರಿಗೆ ನೋಟಿಸ್ ಜಾರಿಯಾಗಿದೆ.
Related Articles
Thank you for your comment. It is awaiting moderation.


Comments (0)