- ಟ್ರಯಲ್ ಕೋರ್ಟ್
- ಹೈಕೋರ್ಟ್
- Like this post: 8
ರಾಜ್ಯದಲ್ಲಿ ಸಂಜೆ ಕೋರ್ಟ್ಗಳ ಸ್ಥಾಪನೆ; ವಕೀಲರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಹೈಕೋರ್ಟ್
- by Ramya B T
- July 28, 2025
- 353 Views

ಬೆಂಗಳೂರು: ರಾಜ್ಯದಲ್ಲಿ ಸಂಜೆ ಕೋರ್ಟ್ಗಳನ್ನು ಸ್ಥಾಪಿಸುವ ಕುರಿತು ಎಲ್ಲ ಜಿಲ್ಲೆಗಳ ವಕೀಲರ ಸಂಘಗಳ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಹೈಕೋರ್ಟ್, ಈ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಪತ್ರ ರವಾನಿಸಿದೆ.
ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಅವರು, ಬೆಂಗಳೂರು ಜಿಲ್ಲೆಯ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಸೇರಿ ರಾಜ್ಯದ 30 ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಜುಲೈ 17ರಂದು ಪತ್ರ ರವಾನಿಸಿದ್ದು, ರಾಜ್ಯದಲ್ಲಿ ಸಂಜೆ ಕೋರ್ಟ್ಗಳನ್ನು ಆರಂಭಿಸುವ ನಿಟ್ಟಿನಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಸಲುವಾಗಿ ಆಯಾ ಜಿಲ್ಲೆಗಳ ವಕೀಲರ ಸಂಘಗಳ ಅಭಿಪ್ರಾಯ ಸಂಗ್ರಹಿಸುವಂತೆ ಹಾಗೂ ಕ್ರೋಢೀಕೃತ ವರದಿಯನ್ನು 3 ತಿಂಗಳ ಒಳಗೆ ಸಲ್ಲಿಸುವಂತೆ ಪತ್ರದಲ್ಲಿ ನಿರ್ದೇಶಿಸಿದ್ದಾರೆ.
ಸಂಜೆ ಕೋರ್ಟ್ಗಳ ಸ್ಥಾಪನೆಗಾಗಿ ಕೇಂದ್ರ ಪ್ರಾಯೋಜಿತ ಯೋಜನೆ (Centrally Sponsored Scheme) ಕುರಿತ ಪರಿಕಲ್ಪನಾ ಟಿಪ್ಪಣಿಯನ್ನು ಕಾನೂನು ಮತ್ತು ನ್ಯಾಯ ಸಚಿವಾಲಯದ ಅಧೀನ ಕಾರ್ಯದರ್ಶಿಗಳು 2025ರ ಮಾರ್ಚ್ 4ರಂದು ರಾಜ್ಯ ಹೈಕೋರ್ಟ್ಗೆ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ವಕೀಲರ ಸಂಘಗಳ ಅಭಿಪ್ರಾಯ ಸಂಗ್ರಹಿಸಲು ಹೈಕೋರ್ಟ್ ಮುಂದಾಗಿದೆ.
Related Articles
Thank you for your comment. It is awaiting moderation.
Comments (0)