ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ; ನಾಳೆ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೊರಡಿಸಿರುವ ಆದೇಶ ರದ್ದುಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪನ್ನು ಹೈಕೋರ್ಟ್ ಮಂಗಳವಾರ (ಸೆಪ್ಟೆಂಬರ್ 24) ಪ್ರಕಟಿಸಲಿದೆ.

ಮುಖ್ಯಮಂತ್ರಿಗಳ ಅರ್ಜಿ ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿರುವ ಮುಡಾ ಹಗರಣ ಕುರಿತ ಕುತೂಹಲಕ್ಕೆ ತೆರೆ ಬೀಳಲಿದೆ.

ಅರ್ಜಿದಾರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್‌‌ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮಕುಮಾರ್ ವಾದ ಮಂಡಿಸಿದ್ದರೆ, ಪ್ರತಿವಾದಿಗಳಾದ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರರ ಪರವಾಗಿ ಹಿರಿಯ ವಕೀಲರಾದ ಕೆ.ಜಿ.ರಾಘವನ್, ಪ್ರಭುಲಿಂಗ ಕೆ. ನಾವದಗಿ, ಲಕ್ಷ್ಮೀ ಅಯ್ಯಂಗಾರ್ ಹಾಗೂ ವಕೀಲ ರಂಗನಾಥ್ ರೆಡ್ಡಿ ವಾದ ಮಂಡಿಸಿದ್ದರು. ಅರ್ಜಿ ಕುರಿತು ವಾದ-ಪ್ರತಿವಾದ ಆಲಿಸಿ, ಸೆಪ್ಟೆಂಬರ್‌ 12ರಂದು ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

Related Articles

Comments (0)

Leave a Comment