ವಿಶೇಷ ಮಕ್ಕಳ ಶಾಲಾ ಶಿಕ್ಷಕರು, ಸಿಬ್ಬಂದಿಗೆ ಸಮಾನ ವೇತನ ಕೋರಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- by Jagan Ramesh
- February 2, 2026
- 163 Views
ಬೆಂಗಳೂರು: ರಾಜ್ಯದ ವಿಶೇಷ ಮಕ್ಕಳ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಸಮಾನ ವೇತನ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಬೋಧಕೇತರರ ಸಂಘ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಾಜ್ಯ ಅಂಗವಿಕಲರ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಫೆಬ್ರವರಿ 26ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.


Comments (0)