ಹೊರಗುತ್ತಿಗೆ ನೌಕರರಿಗೆ ಮಾಸಿಕ ಸಂಭಾವನೆ; ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸುತ್ತೋಲೆಗೆ ಹೈಕೋರ್ಟ್ ತಡೆ
- by LegalSamachar
- November 11, 2026
- 10 Views
ಬೆಂಗಳೂರು: ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ನೂತನ ಕನಿಷ್ಠ ವೇತನದ ಬದಲಿಗೆ ಹಳೆಯ ಕನಿಷ್ಠ ವೇತನ ದರಗಳಲ್ಲಿ ಮಾಸಿಕ ಸಂಭಾವನೆ ಪಾವತಿಸುವ ಸಂಬಂಧ ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲ್ಯ ಇಲಾಖೆ ಹೊರಡಿಸಿದ ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸುತ್ತೋಲೆ ಪ್ರಶ್ನಿಸಿ ಹೊರಗುತ್ತಿಗೆ ನೌಕರರ ಪರವಾಗಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.
ಜತೆಗೆ, ಅರ್ಜಿ ಸಂಬಂಧ ರಾಜ್ಯ ಸರ್ಕಾರ, ಕಾರ್ಮಿಕ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ಅರ್ಜಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, 2026ರ ಮೇ 22ರಿಂದ ಜಾರಿಗೆ ಬಂದಿರುವ ನೂತನ ಕನಿಷ್ಠ ವೇತನದ ಬದಲಿಗೆ ಹಳೆಯ ಕನಿಷ್ಠ ವೇತನ ದರಗಳಲ್ಲಿ ಇಲಾಖೆಯ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕಂಪ್ಯೂಟರ್ ಆಪರೇಟರ್, ಡ್ರೈವರ್, ಡಿ ಗ್ರೂಪ್ ನೌಕರರಿಗೆ ಮಾಸಿಕ ಸಂಭಾವನೆ ಪಾವತಿಸುವ ಸಂಬಂಧ 2026ರ ಸೆಪ್ಟಂಬರ್ 5ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರು ಹೊರಡಿಸಿದ ಸುತ್ತೋಲೆಗೆ ತಡೆ ನೀಡಿತು.
Related Articles
Thank you for your comment. It is awaiting moderation.


Comments (0)