ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆ; ಬಿಎಂಟಿಸಿ ಟ್ರೈನಿ ಚಾಲಕನ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್
- by Prashanth Basavapatna
- January 2, 2026
- 417 Views
ಬೆಂಗಳೂರು: ರಜೆ ಇಲ್ಲದೆಯೇ ಉದ್ಯೋಗಕ್ಕೆ ಗೈರಾಗುವುದು ದುರ್ನತಡೆಯಾಗಲಿದ್ದು, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ತೀಕ್ಷ್ಣವಾಗಿ ನುಡಿದಿರುವ ಹೈಕೋರ್ಟ್, ಬಿಎಂಟಿಸಿ ಟ್ರೈನೀ ಚಾಲಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದ ಕ್ರಮವನ್ನು ಎತ್ತಿಹಿಡಿದಿದೆ.
ಟ್ರೈನೀ ಚಾಲಕರಾಗಿದ್ದ ವೆಂಕಟರಾಮಯ್ಯ ಎಂಬಾತನ ವಜಾ ಆದೇಶ ರದ್ದುಪಡಿಸಿದ್ದ ಕಾರ್ಮಿಕ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಬಿಎಂಟಿಸಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.
ಹೈಕೋರ್ಟ್ ಆದೇಶ:
ಪೂರ್ವಾನುಮತಿ ಮತ್ತು ರಜೆ ಪಡೆಯದೆ ವೆಂಕಟೇಶಯ್ಯ 2016ರ ಡಿಸೆಂಬರ್ 1ರ ನಂತರ ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗಿದ್ದಾರೆ. ಈ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಶಿಸ್ತು ಪ್ರಾಧಿಕಾರ ವೆಂಕಟೇಶಯ್ಯ ಅವರನ್ನು ಸೇವೆಯಿಂದ ವಜಾಗೊಳಿಸಿದೆ. ಉದ್ಯೋಗ ನಿರ್ವಹಣೆ ಮಾಡುವ ಸಮಯದಲ್ಲಿ ಸಕಾರಣವಿಲ್ಲದೆ ಉದ್ಯೋಗಕ್ಕೆ ನೌಕರ ಅನಧಿಕೃತವಾಗಿ ಗೈರಾಗಬಾರದು. ರಜೆಯಿಲ್ಲದೆ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆ ಆಗಲಿದೆ. ದುರ್ನಡತೆಯು ಶಿಸ್ತು ಕ್ರಮವನ್ನು ಸಮರ್ಥಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಯಾವುದೇ ಉದ್ಯೋಗಿ ಗೈರುಹಾಜರಿಯ ರಜೆಯನ್ನು ಒಂದು ಹಕ್ಕು ಎಂದು ಹೇಳಿಕೊಳ್ಳಲಾಗದು. ಈ ಪ್ರಕರಣದಲ್ಲಿ ಉದ್ಯೋಗಿ ಅನಧಿಕೃತವಾಗಿ ನೌಕರಿಗೆ ಗೈರಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವೆಂಕಟೇಶಯ್ಯಗೆ ಶಿಕ್ಷೆ ನೀಡಲಾಗಿದೆ. ಆದರೆ, ನೌಕರನು ದೀರ್ಘಾವಧಿ ಸೇವೆ ಸಲ್ಲಿಸಿದ್ದಾನೆ ಎಂಬ ಆಧಾರದಲ್ಲಿ ಶಿಕ್ಷೆಯನ್ನು ಕಾರ್ಮಿಕ ನ್ಯಾಯಾಲಯ ರದ್ದುಪಡಿಸಿದೆ. ದೀರ್ಘಾವಧಿ ಸೇವೆಯು ದುರ್ನಡತೆಯನ್ನು ಕ್ಷಮಿಸುವ ಮಾನದಂಡವಲ್ಲ ಎಂದು ನ್ಯಾಯಪೀಠ ಹೇಳಿದೆ.
ವೆಂಕಟೇಶಯ್ಯ ಶ್ರದ್ದೆಯಿಂದ ಕೆಲಸ ಮಾಡುವಂತಹ ಆಸಕ್ತಿ ಹೊಂದಿರಲಿಲ್ಲ. ಶ್ರದ್ದೆಯಿಂದ ಕೆಲಸ ಮಾಡದ ಉದ್ಯೋಗಿಗೆ ಯಾವುದೇ ಸಹಾನುಭೂತಿ ತೋರುವ ಅಗತ್ಯವಿಲ್ಲ. ಆ ರೀತಿ ಸಹಾನೂಭೂತಿ ತೋರುವುದೂ ತಪ್ಪಾಗುತ್ತದೆ. ಆದ್ದರಿಂದ, ವೆಂಕಟೇಶಯ್ಯ ಅವರನ್ನು ಸೇವೆಯಿಂದ ವಜಾಗೊಳಿಸಿ ಬಿಎಂಟಿಸಿ 2018ರಂದು 29ರಂದು ಹೊರಡಿಸಿದ್ದ ಆದೇಶವನ್ನು ಪುರಸ್ಕರಿಸಲಾಗುತ್ತಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.
Related Articles
Thank you for your comment. It is awaiting moderation.


Comments (0)