ಹೈಕೋರ್ಟ್ ಕಾಯಂ ನ್ಯಾಯಮೂರ್ತಿಯಾಗಿ ಜಿ. ಬಸವರಾಜ ನೇಮಕ; ಪ್ರಮಾಣವಚನ ಬೋಧಿಸಿದ ಸಿಜೆ

ಬೆಂಗಳೂರು: ರಾಜ್ಯ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿದ್ದ ಗುರುಸಿದ್ದಯ್ಯ ಬಸವರಾಜ ಅವರು ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರು ಹೈಕೋರ್ಟ್ ಕಟ್ಟಡದ ಎರಡನೇ ಮಹಡಿಯಲ್ಲಿರುವ ಮುಖ್ಯ ಪೋಷಕ (Patron in Chief) ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನ್ಯಾಯಮೂರ್ತಿ ಗುರುಸಿದ್ದಯ್ಯ ಬಸವರಾಜ ಅವರಿಗೆ ಪ್ರಮಾಣವಚನ ಬೋಧಿಸಿದರು.

ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ. ಬಸವರಾಜ ಅವರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ 2022ರ ಆಗಸ್ಟ್ 12ರಂದು ಅಧಿಸೂಚನೆ ಹೊರಡಿಸಿತ್ತು. ಆಗಸ್ಟ್ 16ರಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಿದ್ದರು.

Related Articles

Comments (0)

Leave a Comment