ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು; ಹೈಕೋರ್ಟ್ ಮೊರೆ ಹೋದ ಮಹೇಶ್ ಶೆಟ್ಟಿ ತಿಮರೋಡಿ
- by Prashanth Basavapatna
- September 29, 2025
- 308 Views
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲದ ನ್ಯಾಯಪೀಠದ ಮುಂದೆ ಮಂಗಳವಾರ ಅರ್ಜಿ ವಿಚಾರಣೆಗೆ ನಿಗದಿಯಾಗಿದೆ.
ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿದೆ.
ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿರುವ ಮಹೇಶ್ ಶೆಟ್ಟಿ ತಿಮರೋಡಿ, ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.
Related Articles
Thank you for your comment. It is awaiting moderation.


Comments (0)