ಕನಿಷ್ಠ ವೇತನ ಪರಿಷ್ಕರಣೆ ಪ್ರಶ್ನಿಸಿದ ಅರ್ಜಿ; ಆರು ವಾರ ವಿಚಾರಣೆ ಮುಂದೂಡಿದ ಹೈಕೋರ್ಟ್
- by LegalSamachar
- July 3, 2026
- 105 Views
ಬೆಂಗಳೂರು: ರಾಜ್ಯದ 80ಕ್ಕೂ ಅಧಿಕ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ 13ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ 6 ವಾರಗಳ ಕಾಲ ಮುಂದೂಡಿದೆ.
ವೇತನ ಪರಿಷ್ಕರಣೆ ಮಾಡಿ 2026ರ ಮೇ 22ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಷನ್, ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಸೇರಿ ವಿವಿಧ 65ಕ್ಕೂ ಹೆಚ್ಚು ಉದ್ದಿಮೆದಾರರು, ಉದ್ಯೋಗದಾತ ಸಂಸ್ಥೆಗಳು ಸಲ್ಲಿಸಿರುವ 13ಕ್ಕೂ ಅಧಿಕ ಪ್ರತ್ಯೇಕ ರಿಟ್ ಅರ್ಜಿಗಳು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ನಿಗದಿಯಾಗಿದ್ದವು.
ಕೆಲ ಕಾಲ ಅರ್ಜಿದಾರರು ಮತ್ತು ಪ್ರತಿವಾದಿಗಳ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಎಲ್ಲ ಅರ್ಜಿಗಳ ಸಂಬಂಧ ಪ್ರತಿವಾದಿಗಳಾದ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿತು. ಜತೆಗೆ, ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಎಲ್ಲ ಪ್ರತಿವಾದಿಗಳಿಗೆ ಸೂಚಿಸಿ, ವಿಚಾರಣೆಯನ್ನು 6 ವಾರ ಮುಂದೂಡಿತು.
Related Articles
Thank you for your comment. It is awaiting moderation.


Comments (0)