ತುಳು ಅಧಿಕೃತ ಭಾಷೆ: ಸರ್ಕಾರದಿಂದ ಆದೇಶ ಪ್ರಕಟ! ತುಳುವರ ಬಹುಕಾಲದ ಬೇಡಿಕೆಗೆ ಅಧಿಕೃತ ಮುದ್ರೆ;
- by Legal Samachar
- November 27, 2026
- 1 Views
ಮಂಗಳೂರು: ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ಭಾಷೆಯನ್ನು ಜಾರಿಗೊಳಿಸುವ ಸಚಿವ ಸಂಪುಟದ ನಿರ್ಣಯಕ್ಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಈ ಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸ್ವಾಗತಿಸಿ ಅಭಿನಂದನೆ ಸಲ್ಲಿಸಿದೆ.
ಕಳೆದ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಹೆಚ್ಚುವರಿ ಆಡಳಿತ ಭಾಷೆಯಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದರು. ಈ ನಿರ್ಣಯದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನವೆಂಬರ್ 25ರಂದು ರಾಜ್ಯಪಾಲರ ಪರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರು ಅಧಿಕೃತ ಆದೇಶ ಪ್ರಕಟಿಸಿದ್ದಾರೆ.

ಜಿಲ್ಲಾಡಳಿತದಲ್ಲಿ ತುಳು ಭಾಷೆಯನ್ನು ಅನುಷ್ಠಾನಗೊಳಿಸುವ ವಿಧಾನ ಹಾಗೂ ಅಗತ್ಯ ಕ್ರಮಗಳ ಕುರಿತು ಆದೇಶದಲ್ಲಿ ನಿರ್ದೇಶನಗಳನ್ನು ನೀಡಲಾಗಿದೆ.
ತುಳುವರ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ, ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರು ಮತ್ತು ಶಾಸಕರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿನಂದನೆ ಸಲ್ಲಿಸಿದ್ದಾರೆ.


Comments (0)