ಜಾತಿನಿಂದನೆ ಪ್ರಕರಣ; ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ನೀಡಿದ ವಿಶೇಷ ಕೋರ್ಟ್

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯನನ್ನು ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಬಿಎಂಪಿ ಮಾಜಿ ಸದಸ್ಯ ವೇಲುನಾಯ್ಕರ್‌ ನೀಡಿದ್ದ ದೂರು ಆಧರಿಸಿ ವೈಯಾಲಿಕಾವಲ್‌ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಮಾನ್ಯ ಮಾಡಿದ್ದಾರೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಜಾಮೀನು ಅರ್ಜಿಯನ್ನು ಪುರಸ್ಕರಿಸಲಾಗಿದೆ. ಮುನಿರತ್ನ ಅವರು 2 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು ಇಬ್ಬರ ಭದ್ರತೆ ಒದಗಿಸಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರಹೋಗುವಂತಿಲ್ಲ ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

ಲಂಚಕ್ಕೆ ಬೇಡಿಕೆ ಇಟ್ಟ ಹಾಗೂ ಜೀವ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಮುನಿರತ್ನ ಅವರಿಗೆ ವಿಶೇಷ ನ್ಯಾಯಾಲಯ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Related Articles

Comments (0)

Leave a Comment