- ಟ್ರಯಲ್ ಕೋರ್ಟ್
- Like this post: 0
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ಯತ್ನ; 84 ಲಕ್ಷ ಹಣದ ಮೂಲ ಪತ್ತೆಗೆ ಮುಂದಾದ ಐಟಿ ಇಲಾಖೆ
- by Jagan Ramesh
- September 24, 2024
- 48 Views
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಲು ಬಳಕೆ ಮಾಡಲಾಗಿದೆ ಎನ್ನಲಾದ 84 ಲಕ್ಷ ರೂ. ಗಳ ಮೂಲ ಪತ್ತೆ ಹಚ್ಚಲು ಮುಂದಾಗಿರುವ ಆದಾಯ ತೆರಿಗೆ (ಐಟಿ) ಇಲಾಖೆ, ಹಣವನ್ನು ತನ್ನ ವಶಕ್ಕೆ ನೀಡುವಂತೆ ಹಾಗೂ ಹಣದ ಮೂಲದ ಕುರಿತು ಹೆಚ್ಚಿನ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಮಾಡಿದೆ.
ಈ ಸಂಬಂಧ ಐಟಿ ಇಲಾಖೆ ಪರ ವಕೀಲರು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದು, ಅರ್ಜಿಗೆ ಯಾವುದೇ ಆಕ್ಷೇಪಣೆ ಇಲ್ಲ ಎಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದ್ದಾರೆ. ಇದರಿಂದ, ಕೊಲೆ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೊಂದು ರೀತಿಯ ಕಾನೂನು ಹೋರಾಟಕ್ಕೆ ಸಜ್ಜಾಗಬೇಕಿದೆ.
ರೇಣುಕಸ್ವಾಮಿಯ ಕೊಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ನಟ ದರ್ಶನ್ ಅವರು ಇತರ ಆರೋಪಿಗಳಿಗೆ 30 ಲಕ್ಷ ಹಣ ನೀಡಿದ್ದರು. ಈ ಹಣವು ಆರೋಪಿ ಪ್ರದೋಷ್ ಮನೆಯಿಂದ ಕಾಮಾಕ್ಷಿಪಾಳ್ಯ ಠಾಣೆಯ ತನಿಖಾಧಿಕಾರಿಗಳು ಜಪ್ತಿ ಮಾಡಿದ್ದರು. ನಂತರ ಪ್ರಕರಣದಲ್ಲಿ ದರ್ಶನ್ ಪಾತ್ರ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರ ಮನೆಯನ್ನು ತಪಾಸಣೆ ನಡೆಸಲಾಗಿತ್ತು. ಈ ವೇಳೆ 40 ಲಕ್ಷ ಹಣ ದೊರೆತಿತ್ತು. ಇನ್ನೂ ಆರೋಪಿ ಕೇಶವಮೂರ್ತಿ ಮನೆಯಲ್ಲಿ 5 ಲಕ್ಷ, ಅನುಕುಮಾರ್ ಮನೆಯಲ್ಲಿ 1.5 ಲಕ್ಷ ಹಣ ಸೇರಿ ಒಟ್ಟು 84 ಲಕ್ಷ ರೂ. ಗಳನ್ನು ತನಿಖಾಧಿಕಾರಿಗಳು ಜಪ್ತಿ ಮಾಡಿದ್ದರು.
ಮಾಜಿ ಉಪ ಮೇಯರ್ ಮೋಹನ್ ರಾಜ್ ಅವರು ದರ್ಶನ್ ಅವರಿಗೆ ಸಾಲ ನೀಡಿದ್ದರು ಎಂದು ತನಿಖೆ ವೇಳೆ ಕಂಡುಬಂದಿತ್ತು. ಇನ್ನು ಇಷ್ಟು ಹಣ ಸಿನಿಮಾದಲ್ಲಿ ನಟಿಸಿದ ಕಾರಣ ನಿರ್ಮಾಪಕರು ನೀಡಿದ್ದರು ಎಂದು ದರ್ಶನ್ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ತಿಳಿಸಿದ್ದರು. ಇದೀಗ ಈ 84 ಲಕ್ಷ ಹಣಕ್ಕೆ ಲೆಕ್ಕವಿಲ್ಲ ಎಂದು ಭಾವಿಸಿರುವ ಐಟಿ ಇಲಾಖೆ, ಹಣದ ಮೂಲ ಪತ್ತೆ ಮಾಡಲು ನಿರ್ಧರಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ನ್ಯಾಯಾಲಯವನ್ನು ಕೋರಿದೆ.
Related Articles
Thank you for your comment. It is awaiting moderation.
Comments (0)