- ಟ್ರಯಲ್ ಕೋರ್ಟ್
- Like this post: 0
ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ಸತೀಶ್ ಸೈಲ್ಗೆ 7 ದಿನಗಳ ಮಧ್ಯಂತರ ಜಾಮೀನು
- by Jagan Ramesh
- September 11, 2025
- 187 Views
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 7 ದಿನಗಳ ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬಂಧನಕ್ಕೊಳಗಾಗಿದ್ದ ಸತೀಶ್ ಸೈಲ್ ಅವರನ್ನು ಎರಡು ದಿನಗಳ ಅವಧಿಗೆ ಇಡಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಬುಧವಾರವಷ್ಟೇ ಆದೇಶಿಸಿದ್ದರು.
ಆದರೆ, ಇಡಿ ಕಸ್ಟಡಿಯಲ್ಲಿದ್ದಾಗಲೇ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಯಲ್ಲಿ ಸತೀಶ್ ಸೈಲ್ ಅವರನ್ನು ಅಧಿಕಾರಿಗಳು ಗುರುವಾರವೇ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಸತೀಶ್ ಸೈಲ್ ಪರ ವಕೀಲರು, ಉಸಿರಾಟದ ಸಮಸ್ಯೆ, ಲಿವರ್ ಸಿರೋಸಿಸ್ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಸತೀಶ್ ಸೈಲ್ಗೆ ಚಿಕಿತ್ಸೆಯ ಅಗತ್ಯವಿದೆ. ಆದ್ದರಿಂದ, ಮಧ್ಯಂತರ ಜಾಮೀನು ಮಂಜೂರು ಮಾಡಬೇಕೆಂದು ಕೋರಿದರು. ಮನವಿ ಪರಿಗಣಿಸಿದ ನ್ಯಾಯಾಲಯ, 7 ದಿನಗಳ ಅವಧಿಗೆ ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು ಮಾಡಿತು.
Related Articles
Thank you for your comment. It is awaiting moderation.


Comments (0)